ಕರ್ನಾಟಕ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆಗೆ ಮದ್ಯಪಾನದ ಅಮಲಿನಲ್ಲಿ ವಾಹನ ಚಲಾಯಿಸುವ ಅಪರಾಧಿಗಳಿಗೆ ಹಾಗೂ ಪದೇ ಪದೇ ಕಾನೂನನ್ನು ಉಲ್ಲಂಘಿಸುವ ಅಪರಾಧಿಗಳ ವಾಹನದ ಡ್ರೈವಿಂಗ್ ಲೈಸೆನ್ಸ್ ನ್ನು ರದ್ದು ಮಾಡಲು ನಿರ್ದೇಶನ ನೀಡಿದ್ದಾರೆ. ಅಂತೆಯೇ ಅತೀ ವೇಗದ ವಾಹನ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಾನ್ಯ ಸಿದ್ದರಾಮಯ್ಯ ಅವರು ಪದೇ ಪದೇ ಮದ್ಯಪಾನ ಮಾಡಿ ಅಮಲಿನಲ್ಲಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಖಚಿತಪಡಿಸಿದರು.
ವಿಧಾನಸೌಧದಲ್ಲಿ 65 ನೂತನ ಆಂಬುಲೆನ್ಸ್ ಸೇವೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ರಸ್ತೆ ಸುರಕ್ಷತೆ ಸುಧಾರಣೆ ಬಗ್ಗೆ ಸರ್ಕಾರದ ತೀವ್ರ ಬದ್ಧತೆಯನ್ನು ಹೈಲೈಟ್ ಮಾಡಿದರು.
“ಸರ್ಕಾರವು ರಸ್ತೆ ಸುರಕ್ಷತೆಗೆ ಪ್ರಥಮ ಪ್ರಾಮುಖ್ಯತೆ ನೀಡುತ್ತಿದೆ ಮತ್ತು ಅಪಘಾತಗಳು ಮತ್ತು ಸಾವು-ನೋವಿನ ಪ್ರಮಾಣವನ್ನು ಕಡಿಮೆ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಆರಂಭಿಸಿದೆ. ಆದರೆ ಸಾರ್ವಜನಿಕರೂ ಕೂಡ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಹಕರಿಸಬೇಕಾಗಿದೆ.”
Leave feedback about this