LATEST WITH HUB STATE NEWS

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು

ತಾಯೀ ಎಂಬ ಕೊಂಚ ಕನಿಕರ ಇಲ್ಲದೆ ಹೆತ್ತ ಮಕ್ಕಳೇ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟ ಹಾಕಿದ  ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. 62 ವರ್ಷದ ತಾಯೀಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯನ್ನು ಕಳೆದುಕೊಂಡ ಮಹಿಳೆ ಸುಮಾರು ಒಂದೂವರೆ ವರ್ಷದಿಂದ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲ ದಲ್ಲಿ ವಾಸಿಸುತ್ತಿದ್ದ ಎಂದು ತಿಳಿದು ಬಂದಿದೆ.

ಈ ಘಟನೆ ನಡೆದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪುತ್ರರಿಬ್ಬರನ್ನೂ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೌಟುಂಬಿಕ ಕಲಹವೇ  ಈ ಭೀಕರ ಘಟನೆಗೆ  ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಚಂಪಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಮರ್ಬರಿಯಲ್ಲಿ ಶನಿವಾರ ರಾತ್ರಿಯ ಹೊತ್ತಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಹಾಗೂ ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸ್
ತಂಡವು ಮರಕ್ಕೆ ಕಟ್ಟಿದ ಸುಟ್ಟ ದೇಹವನ್ನು ಬಿಡಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದೇವೆ ಎಂದು  ತಿಳಿಸಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪೊಲೀಸ್ ರು ಆಕೆಯ ಇಬ್ಬರು ಮಕ್ಕಳನ್ನು ಬಂಧಿಸಿ  ಸೋಮವಾರದಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು, ಹಾಗೂ ಸದ್ಯಕ್ಕೆ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಕೋರಲಾಗಿದೆ ಎಂದು ತಿಳಿಸಿದ್ದಾರೆ. ಕೌಟುಂಬಿಕ ಕಲಹ ಈ ಘಟನೆಗೆ ಕಾರಣವಾಗಿರಬಹುದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video
X