ಮದ್ಯಪಾನ ಮಾಡಿ ಗಾಡಿ ಚಲಾಯಿಸಿದರೆ ಡ್ರೈವಿಂಗ್ ಲೈಸೆನ್ಸ್ ರದ್ದು – ಮಾನ್ಯ C M ಸಿದ್ದರಾಮಯ್ಯ ಅವರಿಂದ ಖಡಕ್ ಎಚ್ಚರಿಕೆ
ಕರ್ನಾಟಕ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆಗೆ ಮದ್ಯಪಾನದ ಅಮಲಿನಲ್ಲಿ ವಾಹನ ಚಲಾಯಿಸುವ ಅಪರಾಧಿಗಳಿಗೆ ಹಾಗೂ ಪದೇ ಪದೇ ಕಾನೂನನ್ನು ಉಲ್ಲಂಘಿಸುವ ಅಪರಾಧಿಗಳ ವಾಹನದ ಡ್ರೈವಿಂಗ್ ಲೈಸೆನ್ಸ್ ನ್ನು ರದ್ದು ಮಾಡಲು ನಿರ್ದೇಶನ ನೀಡಿದ್ದಾರೆ. ಅಂತೆಯೇ ಅತೀ ವೇಗದ ವಾಹನ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಾನ್ಯ ಸಿದ್ದರಾಮಯ್ಯ ಅವರು ಪದೇ ಪದೇ ಮದ್ಯಪಾನ ಮಾಡಿ ಅಮಲಿನಲ್ಲಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಖಚಿತಪಡಿಸಿದರು. ವಿಧಾನಸೌಧದಲ್ಲಿ 65 ನೂತನ ಆಂಬುಲೆನ್ಸ್